ಮೂಡುಬಿದಿರೆ : ಸರಸ್ವತಿ ಕನ್ನಡ ರತ್ನ ರಾಜ್ಯಪ್ರಶಸ್ತಿಗೆ ಡಾ.ರಾಮಕೃಷ್ಣ ಶಿರೂರು ಆಯ್ಕೆ

0
77

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ.ರಾಮಕೃಷ್ಣ ಶಿರೂರು ಅವರನ್ನು ಸರಸ್ವತಿ ಕನ್ನಡ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು 2026 ಏಪ್ರಿಲ್ 19ರ ದಾವಣಗೆರೆಯ ಚೆನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪ ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸರಸ್ವತಿ ದಾಸಪ್ಪ
ಶೆಣೈ ಮತ್ತು ದಾವಣಗೆರೆಯ ಕಲಾಕಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ ಅವರು ತಿಳಿಸಿರುತ್ತಾರೆ.

ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರಿಂದ ಇನ್ನಷ್ಟು ಶಿಕ್ಷಣ,ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದು ಕಲಾ ಕುಂಚ ದಾವಣಗೆರೆಯ ಸಂಸ್ಥಾಪಕ ಅಧ್ಯಕ್ಷರಾದ ಗಣೇಶ ಶೆಣೈ ಮತ್ತು ಪ್ರಧಾನ ಕಾರ್ಯದರ್ಶಿ ಕೆ. ಸಿ. ಉಮೇಶ್, ಕಲಾ ಕುಂಚ ದಾವಣಗೆರೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಗಣೇಶ್ ಶೆಣೈ ಅವರು ಡಾ. ಶಿರೂರು ಅವರಿಗೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here