ಡುಬಿದಿರೆ: ಸಪಳಿಗ ಯಾನೆ ಗಾಣಿಗರ ಸೇವಾ ಸಂಘ (ರಿ.), ಗಾಣಿಗರ ಮಹಿಳಾ ವೇದಿಕೆ ಮತ್ತು ಯುವ ವೇದಿಕೆ ಮೂಡುಬಿದಿರೆ ಇವುಗಳ ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ ಪುಸ್ತಕ ವಿತರಣೆ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜು. 13ರಂದು ಮೂಡುಬಿದಿರೆಯ ಪೊನ್ನೆಚ್ಚಾರಿ ಶ್ರೀ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಬೆಳಿಗ್ಗೆ 8.15ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದ್ದು, 9.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಪೂರ್ವಾಹ್ನ 10.30ರಿಂದ ಸಭಾಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿವೇತನ ಹಾಗೂ ಪುಸ್ತಕ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಪ್ರಸಾದದ ಬಳಿಕ ಸಮಿತಿ ಪುನರ್ ರಚನೆ ನಡೆಯಲಿದೆ.