ಮೂಡುಬಿದಿರೆ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 35ನೇ ಶಾಖೆಯ ಉದ್ಘಾಟನಾ ಸಮಾರಂಭ

0
24

ಮೂಡುಬಿದಿರೆ : ಮಂಗಳೂರು ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 34 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 35ನೇ ಮೂಡಬಿದ್ರಿಯ ಶಾಖೆಯನ್ನು ಮೂಡಬಿದಿರೆಯ ಮುಖ್ಯ ರಸ್ತೆಯಲ್ಲಿರುವ ಅಂಚೆ ಕಚೇರಿಯ ಎದುರಗಡೆಯ “ರಾಮಯ್ಯ ಕಾಂಪ್ಲೇಕ್ಸ್” ನಲ್ಲಿ ಎಪ್ರಿಲ್ 19 ರಂದು ಭಾನುವಾರ ಪೂರ್ವಾಹ್ನ 11.00 ಗಂಟೆಗೆ ಉದ್ಘಾಟನೆಗೊಂಡು ಸಾರ್ವಜನಿಕ ಸೇವೆಗೆ ಅರ್ಪಿಸಿಕೊಳ್ಳಲು ಸಜ್ಜಾಗಿದೆ.

ಚಿತ್ತರಂಜನ್ ಬೋಳಾರ್

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಇದರ ಅಧ್ಯಕ್ಷರಾದ “ಸಹಕಾರ ರತ್ನ” ಡಾ. ಎಮ್. ಎನ್ ರಾಜೇಂದ್ರ ಕುಮಾರ್ ರವರು ನೂತನ ಶಾಖೆಯ ಉದ್ಘಾಟನೆಯನ್ನು ನೆರೆವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ರವರು ವಹಿಸಲಿದ್ದಾರೆ. ಮೂಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಉಮಾನಾಥ ಎ ಕೋಟ್ಯಾನ್ ರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿರುವ ಐ ತಾರನಾಥ ಪೂಜಾರಿ ರವರು ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದ್ರಿಯ ಅಧ್ಯಕ್ಷರಾದ ಎಮ್. ಮೋಹನ್ ಆಳ್ವ ರವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು. ಇದರ ನಿರ್ದೇಶಕರಾದ “ಸಹಕಾರ ರತ್ನ” ಭಾಸ್ಕರ್ ಎಸ್ ಕೋಟ್ಯಾನ್ ರವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ ಸರಕಾರದ ಮಾಜಿ ಸಚಿವರಾದ ಸನ್ಮಾನ್ಯ ಅಭಯಚಂದ್ರ ಜೈನ್ ರವರು ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಮೂಡಬಿದ್ರಿಯ ಅಧ್ಯಕ್ಷರಾದ ಸುರೇಶ್ ಕೆ. ಪೂಜಾರಿ ರವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ವಕೀಲರ ಸಂಘ ಮೂಡಬಿದ್ರಿಯ ಅಧ್ಯಕ್ಷರಾದ ಹರೀಶ್ ಪಿ. ಇವರು ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ.

ಪುರಸಭೆ ಮೂಡಬಿದಿರೆಯ ನಿಕಟಪೂರ್ವ ಉಪಾಧ್ಯಕ್ಷರಾದ ನಾಗರಾಜ್ ಪೂಜಾರಿ ರವರು ಆವರ್ತನ ಖಾತೆಗೆ ಚಾಲನೆ ನೀಡಲಿದ್ದಾರೆ. ದೇವಾಡಿಗ ಸುಧಾರಕ ಸಂಘ (ರಿ.) ಮೂಡಬಿದಿರೆಯ ಅಧ್ಯಕ್ಷರಾದ ಸನ್ಮಾನ್ಯ ಪುರಂದರ ದೇವಾಡಿಗ ರವರು ಪಿಗ್ಮಿ ಖಾತೆಗೆ ನೀಡಲಿದ್ದಾರೆ. ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಳ್ತಂಗಡಿಯ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ, ಪ್ರೆಸ್ ಕ್ಲಬ್ ಮೂಡಬಿದ್ರಿಯ ಅಧ್ಯಕ್ಷರಾದ ಸೀತಾರಾಮ್ ಆಚಾರ್ಯ, ಉದ್ಯಮಿಯಾದ ಶ್ರೀಪತಿ ಭಟ್ ಹಾಗೂ ಮೂಡಬಿದ್ರಿ ಶಾಖೆಯ ಕಟ್ಟಡದ ಮಾಲೀಕರಾದ ಸುರೇಶ್ ಆಚಾರ್ಯ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10. ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು.

ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here