ಮೂಡುಬಿದಿರೆ ಪುರಸಭಾ ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟನೆ

0
26

ದ.ಕ. ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಮೂಡುಬಿದರೆ ಪುರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ವಾಣಿಜ್ಯ ಸಂಕೀರ್ಣವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.


ತಮ್ಮ ಉದ್ಘಾಟನಾ ಭಾಷಣದಲ್ಲಿ ಉಪಯೋಗ ಇಲ್ಲದೆ ಇದ್ದ ಸ್ಥಳದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಿ ಪುರಸಭೆಯವರು ಉತ್ತಮ ಕೆಲಸವನ್ನು ಮಾಡಿರುತ್ತಾರೆ. ಬಸ್ಸು ನಿಲ್ದಾಣದ ಬಳಿಯಲ್ಲಿ ಇರುವ ಈ ವಾಣಿಜ್ಯ ಸಂಕೀರ್ಣವು ಅತ್ಯಂತ ಉತ್ತಮ ಆದಾಯದ ಸ್ಥಳದಲ್ಲಿ ಇದೆ. ತನ್ಮೂಲಕವಾಗಿ ಪುರಸಭೆಯೂ ಕೂಡ ಉತ್ತಮ ಆದಾಯವನ್ನು ಹೊಂದಿ ಹೆಚ್ಚಿನ ಬೆಳವಣಿಗೆಯನ್ನು ಕಾಣಲು ಸಾಧ್ಯವಿದೆ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಚಿವರೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್, ಕರಾವಳಿ ಅಭಿವೃದ್ಧಿ ರಾಜ್ಯಕಾರದ ಅಧ್ಯಕ್ಷ ಎಂಎ ಗಪ್ಪೂರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಪಾಡಿವಾಳ್, ಗ್ಯಾರೆಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ಇಂದು ಎಂ, ಕಾರ್ಯಪಾಲಕ ಅಭಿಯಂತರರುಗಳು, ಪುರಸಭಾ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಜರಿದ್ದರು. ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.
.

LEAVE A REPLY

Please enter your comment!
Please enter your name here