ದೈಹಿಕ ಸಂಬಂಧ ಬೆಳೆಸಿ ಮದುವೆಗೆ ನಿರಾಕರಣೆ; ಮೂಡುಬಿದಿರೆಯ ಫೋಟೋಗ್ರಾಫರ್ ಬಂಧನ

0
243

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್ ಒಬ್ಬನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಪ್ರಕರಣದ ಆರೋಪಿ. ಈತ ಉಡುಪಿ ಮೂಲದ ಯುವತಿಯೊಬ್ಬಳೊಂದಿಗೆ ಇನ್ಸ್ಟಾ ಗ್ರಾಂನಲ್ಲಿ ಸಲುಗೆ ಬೆಳೆಸಿ, ಬಳಿಕ ದೈಹಿಕವಾಗಿ ಆಕೆಯನ್ನು ಬಳಸಿಕೊಂಡಿದ್ದಾನೆ. ಆದರೆ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ. ಯುವತಿ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here