ಮೂಡುಬಿದಿರೆ : ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ : ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ಆರು ಮಂದಿ ಗಣ್ಯರಿಗೆ ಗೌರವ ಸನ್ಮಾನ

0
15

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ಆರು ಮಂದಿ ಗಣ್ಯರನ್ನು ಗೌರವ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ.

ಕನ್ನಡ ಸೇವಾ ಕ್ಷೇತ್ರದಲ್ಲಿ ಸುದರ್ಶನ ಶೆಟ್ಟಿ ಕಡಂದಲೆ, ಪತ್ರಿಕೋದ್ಯಮದಲ್ಲಿ ಪ್ರಸನ್ನ ಹೆಗ್ಡೆ, ಯಕ್ಷಗಾನದಲ್ಲಿ ದಾಮೋದರ ಸಪಲಿಗ, ಕಲಾರಂಗದಲ್ಲಿ ವೆಂಕಟೇಶ ಬಂಗೇರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಕಿರಣ್ ಭಟ್ (ಕಡಂದಲೆ) ಹಾಗೂ ಕೃಷಿ ಕ್ಷೇತ್ರದಲ್ಲಿ ಎಡ್ವರ್ಡ್ ರೆಬೆಲ್ಲೋ ತಾಕೊಡೆ ಅವರನ್ನು ಸನ್ಮಾನಿಸಲಾಗುತ್ತದೆ.
ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರು, ಗಣ್ಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಉತ್ತೇಜನಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಫೆಬ್ರವರಿ 21ರಂಸು ಕಡಂದಲೆ ಪಾಲಡ್ಕದ ಪೂಪಾಡಿಕಲ್ಲುವಿನ ಶ್ರೀ ನಾರಾಯಣಗುರು ಸಭಾಭವನದಲ್ಲಿ ಸಮ್ಮೇಳನ ನಡೆಯಲಿದ್ದು, ಸಮಾರಂಭದಲ್ಲಿ ಸಾಧಕರನ್ನು ಗೌರವಿಸಲಾಗುವುದು ಎಂದು ಕಸಾಪ ತಾಲೂಕು ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here