ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಮೂಡುಬಿದಿರೆ ವತಿಯಿಂದ 2025ರ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭವು ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆ 13 ರಂದು ಸಂಜೆ 5 ಗಂಟೆಗೆ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ.
ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ಶಿವರಾಮ ಕಾರಂತ ಪ್ರಶಸ್ತಿಗೆ ಹಿರಿಯ ಲೇಖಕ ಪ್ರೊ.ಎನ್.ಟಿ.ಭಟ್, ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಮತ್ತು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಿವರಾಮ ಕಾರಂತ ಪ್ರತಿಷ್ಠಾನ ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.