ಮೂಡುಬಿದಿರೆ : ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025–26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ತೋರಿದ್ದು, ಸಂಸ್ಥೆಗೆ ಶೇ.100 ಫಲಿತಾಂಶ ದೊರೆತಿದೆ.
ಶ್ರುತಿ ಅಂಕ 510 ಅಂಕ

ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 20 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾದರೆ, ಉಳಿದ 19 ಮಂದಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಶೇಷವಾಗಿ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಸಾಧನೆ ಮಾಡಿದ್ದಾರೆ. ಸುಶ್ಮಿತಾ 537 ಅಂಕಗಳು ಮತ್ತು ಶ್ರುತಿ 510 ಅಂಕಗಳನ್ನು ಗಳಿಸಿ ಸಂಸ್ಥೆಗೆ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ.
ಇದೇ ವೇಳೆ, ಪ್ರಥಮ ಪಿಯುಸಿ ವಿಭಾಗದಲ್ಲಿಯೂ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100 ಫಲಿತಾಂಶ ದಾಖಲಿಸಿರುವುದು ಗಮನಾರ್ಹ ಸಾಧನೆಯಾಗಿದೆ.
ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ, ಸಂಚಾಲಕರಾದ ವಕೀಲ ಶ್ವೇತಾ ಜೈನ್, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದವು ವಿದ್ಯಾರ್ಥಿಗಳ ಈ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಭವಿಷ್ಯಕ್ಕೆ ಶುಭಾಶಯ ಕೋರಿದ್ದಾರೆ.

