ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ

0
54


ವರದಿ ರಾಯಿ ರಾಜ ಕುಮಾರ
ಮೂಡುಬಿದಿರೆ ತಾಲೂಕು ಕಾರ್ಯನಿರತ ಪಟ್ಟದ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಮಾಜ ಮಂದಿರದಲ್ಲಿ ಜನವರಿ ಒಂದರಂದು ನಡೆಯಿತು. ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಪತ್ರಕರ್ತರ ಭವನಕ್ಕೆ ಸಾಕಷ್ಟು ಹಣವನ್ನು ಹೊಂದಿಸಲು ಪ್ರಯತ್ನಿಸಲಾಗುತ್ತಿದೆ. ಎಲ್ಲರ ಸಹಕಾರವನ್ನು ಇದಕ್ಕೆ ಒದಗಿಸಿಕೊಡುವ ಭರವಸೆಯನ್ನು ನೀಡಿದರು. ಕಾರ್ಯಗಾರವನ್ನು ಸದ್ಯದಲ್ಲಿಯೇ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿ ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿಎನ್ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣವನ್ನು ಬೋಧಿಸಿದರು. ದಕ್ಷಿಣ ಕನ್ನಡ ಜಿಲ್ಲಾ ವೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಅವರು ಸಂಘದ ಅಭಿವೃದ್ಧಿಗೆ ಎಲ್ಲರೂ ಸೇರಿ ದುಡಿದು ತಾಲೂಕು ಸಂಘವನ್ನು ಉತ್ತಮ ಹಂತಕ್ಕೆ ಕೊಂಡೊಯ್ಯಲು ಸಲಹೆಯನ್ನು ನೀಡಿ ಶುಭ ಹಾರೈಸಿದರು. ಮಹಾರಾಷ್ಟ್ರ ಕನ್ನಡಿಗರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಶುಭ ಹಾರೈಸಿದರು.
ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಂದು ನಿಧನರಾದ ನಿಟ್ಟೆ ಶಿಕ್ಷಣ ಸಂಸ್ಥೆಗಳ ರೂವಾರಿ ವಿನಯ ಹೆಗಡೆಯವರ ಸ್ಮರಣಾರ್ಥ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ವೇದಿಕೆಯಲ್ಲಿ ಕಾರ್ಯದರ್ಶಿ ಪ್ರೇಮ ಶ್ರೀ ಹಾಜರಿದ್ದರು. ಸಂಘದ ಕಾರ್ಯದರ್ಶಿ ಜೈಸನ್ ತಾಕೊಡೆ ವಂದಿಸಿದರು.
.

LEAVE A REPLY

Please enter your comment!
Please enter your name here