ಮೂಡುಬಿದಿರೆ : ಜು.19ರಂದು ಆಟಿಡೊಂಜಿ ದಿನ – ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

0
99

ಮೂಡುಬಿದಿರೆ : ಸಾಲಿಯಾನ್ ಹಾಗೂ ಕೋಟಿಯಾನ್ ಕುಟುಂಬದ ವತಿಯಿಂದ ಜುಲೈ 19, 2026 (ಭಾನುವಾರ) ನಡೆಯಲಿರುವ ‘ಅಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.

2025–26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ 90% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಸಾಲಿಯಾನ್ ಹಾಗೂ ಕೋಟಿಯಾನ್ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಕುಟುಂಬದ ಸದಸ್ಯರಾದ ಮುಂಬೈ ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ ನ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಸಾಲಿಯಾನ್ ಮುಂಬೈ ಅವರ ಸಹಕಾರದೊಂದಿಗೆ ಪ್ರೋತ್ಸಾಹ ಧನ ವಿತರಿಸಿ ಸನ್ಮಾನಿಸಲಾಗುವುದು.

ಈ ಕಾರ್ಯಕ್ರಮದ ಮತ್ತೊಂದು ವಿಶೇಷ ಆಕರ್ಷಣೆಯಾಗಿ ದಿಗಂಬರ ಆಂಗ್ಲ ಮಾಧ್ಯಮ ಶಾಲೆ, ಮೂಡಬಿದಿರೆಯ ಶಿಕ್ಷಕಿ ಶೋಭಾ ಸುರೇಶ್ ಅವರು ‘ಆಟಿ ತಿಂಗಳ ವಿಶೇಷತೆ ಮತ್ತು ಅದರ ಸಾಂಸ್ಕೃತಿಕ ಮಹತ್ವ’ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

ಕುಟುಂಬದ ಸುಮಾರು 25 ಕ್ಕಿಂತಲೂ ಹೆಚ್ಚು ಸದಸ್ಯರಿಂದ ಆಟಿ ತಿಂಗಳಲ್ಲಿ ತಯಾರಿಸುವ ವಿವಿಧ ಬಗೆಯ ತಿಂಡಿ, ತಿನಸುಗಳು ಬರಲಿದೆ.

ಕಾರ್ಯಕ್ರಮವು ಕುಟುಂಬದ ಮನೆಯಲ್ಲಿ ನಡೆಯಲಿದ್ದು, ಎಲ್ಲಾ ಕುಟುಂಬದ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಆಹ್ವಾನಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮುಖ್ಯಸ್ಥರಾದ ಸುಧಾಕರ್‌ ಕೋಟ್ಯಾನ್‌ ಚೌಕಿ ಮಠ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.