ಮೂಡುಬಿದಿರೆ : ಜು.19 ರಂದು ಜಿಲ್ಲಾ ಕಂಬಳ ಸಮಿತಿ ಸಭೆ

0
3

ಜು.19 ರಂದು ಮೂಡುಬಿದಿರೆಯಲ್ಲಿ ನಡೆಯಲಿರುವ ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸರ್ಕಾರ ಹಾಗೂ ಮೈಸೂರು ದಸರಾ ಸಮಿತಿ ಕೈಗೊಂಡ ಅಭಿಪ್ರಾಯದ ಬಗ್ಗೆ ಚರ್ಚಿಸಲಾಗುವುದು.

ಮೈಸೂರು ದಸರಾ ಕಂಬಳ ಆಯೋಜಿಸಲು ಸಿದ್ಧತೆಗಳು ನಡೆಯುತ್ತಿದ್ದು ಈ ಬಗ್ಗೆ ಕೋಣದ ಯಜಮಾನರು, ತೀರ್ಪುಗಾಗರು, ಓಟಗಾರರು, ಕೋಣ ಓಡಿಸುವವರು, ಪರಿಚಾರಕ ವರ್ಗ, ಕಂಬಳ ಸಂಘಟಕರೊಂದಿಗೆ ಸಭೆಯಲ್ಲಿ ಚರ್ಚಿಸಿ ಅವರ ಅಭಿಪ್ರಾಯದಂತೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಸಾಧು ಸನಿಲ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.