ಮೂಡುಬಿದಿರೆ : ಲಕ್ಷ್ಮಣಾನಂದ ಸಹಕಾರ ಸಂಘದ ಏಳನೇ ಶಾಖೆ ಉದ್ಘಾಟನೆ

0
7

ಮೂಡುಬಿದಿರೆ : ಮಂಗಳೂರಿನ ಜಪ್ಪು ಮಾರ್ಗನ್ಸ್ ಗೇಟ್ ಪ್ರದೇಶದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಸಪ್ಟೆಂಬರ್ ಆರರಂದು ಉದ್ಘಾಟನೆಗೊಂಡಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ದೀಪ ಬೆಳಗಿ ಶಾಖೆಯನ್ನು ಉದ್ಘಾಟಿಸಿದರು. ಮಾಜಿ ಸಚಿವ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ, ಮಾಜಿ ಸಚಿವ ಜೆ ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದು ಠೇವಣಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಪ್ರೇಮಾನಂದ ಕೆ ಎಸ್, ಸಂಘದ ಮುಖ್ಯ ಕಾರ್ಯದರ್ಶಿ ಚಂದನ್ ಕೋಟೆಕಾರ್, ಉಪಾಧ್ಯಕ್ಷ ಕೆ ದಿನೇಶ್ ರಾವ್ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು, ಶಾಖಾ ಪ್ರಬಂಧಕಿ ಚಂದ್ರಿಕಾ ಹಾಜರಿದ್ದರು.

ವರದಿ ರಾಯಿ ರಾಜ ಕುಮಾರ್