ಮೂಡುಬಿದಿರೆ : ಮನೆಯಲ್ಲೇ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

0
33

ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ಮಿಜಾರು ಕೊಪ್ಪದಕುಮೇರಿಯಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ (ಜು.17) ಸಂಜೆ ನಡೆದಿದೆ.

ಮೃತರನ್ನು ಸ್ನೇಹಾ, ಸ್ಥಳೀಯ ಅರ್ಚಕರಾದ ಗುರು ಭಟ್ ಅವರ ಪತ್ನಿ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿದು ಮೂಡುಬಿದಿರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಯ ಹಿಂದಿನ ಕಾರಣಗಳ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.