Saturday, May 24, 2025
Homeಉಡುಪಿದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ರಾಜ್ಯದಲ್ಲೇ ಅತ್ಯಧಿಕ ನೋಟಾ ಮತಗಳ ಚಲಾವಣೆ

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ರಾಜ್ಯದಲ್ಲೇ ಅತ್ಯಧಿಕ ನೋಟಾ ಮತಗಳ ಚಲಾವಣೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತಗಳು ಬಿದ್ದಿವೆ. ಉಭಯ ಕ್ಷೇತ್ರಗಳಲ್ಲಿ ನೋಟಾ ಅಭಿಯಾನವೊಂದು ನಡೆದಿದ್ದ ಹಿನ್ನೆಲೆಯಲ್ಲಿ ಈ ಪ್ರಮಾಣದಲ್ಲಿ ನೋಟಾ ಮತಗಳು ಚಲಾವಣೆಯಾಗಿವೆ ಎಂದು ಅಂದಾಜಿಸಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 23,576 ಮತಗಳು ನೋಟಾಗೆ ಚಲಾವಣೆಯಾಗಿವೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 11,269 ಮತಗಳು ನೋಟಾಗೆ ಬಿದ್ದಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳ್ತಂಗಡಿಯಲ್ಲಿ ನೋಟಾಗೆ ಹೆಚ್ಚು ಮತಗಳು ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7691 ಮತಗಳು ನೋಟಾಗೆ ಚಲಾವಣೆಗೊಂಡಿವೆ. ಮೂಡುಬಿದಿರೆಯಲ್ಲಿ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2,302. ಸುಳ್ಯ 4,541 ಮತಗಳು ನೋಟಾಗೆ ಚಲಾವಣೆಯಾಗಿವೆ. ಅಂಚೆ ಮತದಾನದಲ್ಲೂ 61 ಮತಗಳು ಬಿದ್ದಿವೆ.ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕುಂದಾಪುರದಲ್ಲಿ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1.135, ಚಿಕ್ಕಮಗಳೂರು 814, ತರಿಕೆರೆ 684 ಮತಗಳು ನೋಟಾಕ್ಕೆ ಬಿದ್ದಿವೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹೋರಾಟಗಾರರು ಚುನಾವಣೆಯ ವೇಳೆ ನೋಟಾ ಅಭಿಯಾನ ನಡೆಸಿದ್ದರು.

RELATED ARTICLES
- Advertisment -
Google search engine

Most Popular