250ಕ್ಕೂ ಹೆಚ್ಚು ಅಕ್ರಮಸಕ್ರಮ ಅರ್ಜಿಗಳು ವಿಲೇವಾರಿಗೆ ಬಾಕಿ : ಅರಣ್ಯ ಇಲಾಖೆಯ ಸಮಸ್ಯೆ. ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಜಂಟಿ ಸರ್ವೆ : ಮುಖ್ಯಮಂತ್ರಿಯವರಿಗೆ ಮನವಿ.

0
65

ಹೆಬ್ರಿ : ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಅಕ್ರಮ ಸಾಗುವಳಿದಾರರಿಗೆ ತಮ್ಮ ಜಮೀನುಗಳ ಪಟ್ಟಾ ಹಕ್ಕುಪತ್ರ ಪಡೆಯಲು ಕಾನೂನು ಸಮಸ್ಯೆಯಾಗಿದ್ದು ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಜಂಟಿ ಸರ್ವೆಯನ್ನು ನಡೆಸಿ ಹಕ್ಕುಪತ್ರ ನೀಡುವಂತೆ ಮುಖ್ಯಮಂತ್ರಿಯವರಿಗೆ ಕೆಪಿಸಿಸಿ ಸದಸ್ಯರಾದ ಸಾಮಾಜಿಕ ಹೋರಾಟಗಾರ ಹೆಬ್ರಿಯ ನೀರೆ ಕೃಷ್ಣ ಶೆಟ್ಟಯವರು ಮನವಿ ಮಾಡಿದ್ದಾರೆ.
ನಾಡ್ಪಾಲು ಗ್ರಾಮದಲ್ಲಿ 150 ಮತ್ತು ಹೆಬ್ರಿ ಗ್ರಾಮದ 100 ಕ್ಕಿಂತ ಹೆಚ್ಚಿನ ಅಕ್ರಮಸಕ್ರಮದಲ್ಲಿ ಸಲ್ಲಿಸಿದ ಅರ್ಜಿ ನಮೂನೆ 50, 53 ಮತ್ತು 57ರ ಫಲಾನುಭವಿಗಳಿಗೆ ಅರಣ್ಯಮತ್ತು ಕಂದಾಯ ಇಲಾಖೆಯ ಭೂಮಿಯನ್ನು ಜಂಟಿ ಸರ್ವೆ ನಡೆಸಿ ಪಟ್ಟಾ ಪತ್ರವನ್ನು ದೊರಕುವಂತೆ ಆದೇಶ ನೀಡುವಂತೆ ಮುಖ್ಯಮಂತ್ರಿಯವರನ್ನು ಮನವಿ ಮಾಡಿದ್ದಾರೆ.
ಪರಭಾದಿತ ಅರಣ್ಯ ಪ್ರದೇಶವಿದ್ದಲ್ಲಿ, ಅದಕ್ಕೆ ಹೊಂದಿಕೊಂಡಿರುವ ಸರ್ವೆ ನಂಬ್ರಗಳಲ್ಲಿ ಗೊಂದಲಗಳಿದ್ದರೆ ಕಂದಾಯ ಇಲಾಖೆಯಿಂದ ಪ್ರಸ್ತಾವನೆಯನ್ನು ನಿಯಮನುಸಾರ ಮುಂದಿನ ಕ್ರಮಕ್ಕಾಗಿ ಅರಣ್ಯ ಇಲಾಖೆಗೆ ಕಳುಹಿಸುವಂತೆ ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದು ನೀರೆ ಕೃಷ್ಣ ಶೆಟ್ಟಿಯವರು ತಿಳಿಸಿದ್ದಾರೆ.
ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದ ಸರ್ವೆ ನಂಬ್ರ 126ರಲ್ಲಿ 26,205 ಎಕರೆ, ಹೆಬ್ರಿ ಗ್ರಾಮದ ಸರ್ವೆ ನಂಬ್ರ 210ರಲ್ಲಿ 2,238 ಎಕರೆ ಸೇರಿ ಒಟ್ಟು ೩೦,೩೪೩ ಎಕರೆ ವಿಸ್ತೀರ್ಣವಿದೆ. ಆದರೆ ಹೆಬ್ರಿ ವಲಯದ ಅರಣ್ಯ ದಾಖಲೆಗಳ ಪ್ರಕಾರ 26,653 ಎಕರೆ ಮಾತ್ರ ಅರಣ್ಯ ಪ್ರದೇಶವಾಗಿದ್ದು ಉಳಿಕೆಯ 1550 ಎಕರೆಗೂ ಹೆಚ್ಚಿನ ಕಂದಾಯ ಅನಾಧೀನ ಭೂಮಿಗಳು 2 ಸರ್ವೆ ನಂಬರ್‌ಗಳಲ್ಲಿ ಅಡಕವಾಗಿದೆ.
ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಸರ್ವೆ ನಂಬರ್‌ ಗಳ ಜಮೀನುಗಳನ್ನು ಜಂಟಿ ಸರ್ವೆ ನಡೆಸಿದರೆ ಅರಣ್ಯ ಇಲಾಖೆಯ ತಾಂತ್ರಿಕ ಸಮಸ್ಯೆಗಳಿಂದ50-60 ವರ್ಷಗಳಿಂದ ಸಾಗುವಾಳಿ ಮಾಡಿಕೊಂಡು ತಮ್ಮ ಜಾಗದ ಹಕ್ಕುಪತ್ರಕ್ಕಾಗಿ ಎದುರು ನೋಡುತ್ತಿರುವ ಮನೆಮಂದಿಗೆ ನ್ಯಾಯ ದೊರೆಯುವ ಮೂಲಕ ಬಡ ಕೃಷಿಕರಿಗೆ ಶೀಘ್ರವಾಗಿ ಅಕ್ರಮಸಕ್ರಮ ಕಾಯ್ದೆಯಂತೆ ಪಟ್ಟಾ ಪತ್ರ ನೀಡಲು ಅವಕಾಶವಿದೆ. ಕೂಡಲೇ ಕ್ರಮ ಕೈಗೊಳ್ಳುವಂತೆ ನೀರೆ ಕೃಷ್ಣ ಶೆಟ್ಟಿಯವರು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here