ಜೋಡುಕಟ್ಟೆಯಲ್ಲಿ ಸೆ.5ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮ

0
14

ಮೂಡುಬಿದಿರೆ : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ JK ಫ್ರೆಂಡ್ಸ್ ಜೋಡುಕಟ್ಟೆ ಇವರ ಆಶ್ರಯದಲ್ಲಿ ಸೆಪ್ಟೆಂಬರ್ 5ರಂದು ಜೋಡುಕಟ್ಟೆಯಲ್ಲಿ ಅದ್ದೂರಿ ಮೊಸರು ಕುಡಿಕೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳ ಕಾರ್ಯಕ್ರಮ ನಡೆಯಲಿದೆ.

ಸೆಪ್ಟೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯ ದೊಂಪದ ಬಲಿ ಕ್ಷೇತ್ರದ ಸಮೀಪ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮವನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ನೀಡಲಾಗುವುದು. ಸ್ಥಳೀಯ ಪ್ರತಿಭೆಗಳಿಗೆ ಹಾಗೂ ಕ್ರೀಡಾಸಕ್ತರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಇದು ಉತ್ತಮ ವೇದಿಕೆಯಾಗಲಿದೆ.

ಜನತಾನಗರ, ಜೋಡಿಕಟ್ಟೆ,ಪೂಪಾಡಿಕಲ್ಲು ಹಾಗೂ ಪಾಲಡ್ಕ ವ್ಯಾಪ್ತಿಯವರಿಗೆ ಮಾತ್ರ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ಸಾಂಸ್ಕೃತಿಕ ಹಾಗೂ ಸಂಭ್ರಮದ ವಾತಾವರಣವನ್ನು ಮತ್ತಷ್ಟು ಹೆಚ್ಚಿಸುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ JK ಫ್ರೆಂಡ್ಸ್ ಜೋಡುಕಟ್ಟೆ ಪ್ರಕಟಣೆಯಲ್ಲಿ ವಿನಂತಿಸಿದೆ.