ಶಿರ್ಲಾಲು: ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆಪ್ಟೆಂಬರ್ 6ರಂದು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಆಕರ್ಷಕ ಮನೋರಂಜನಾ ಸ್ಪರ್ಧೆಗಳು ನಡೆಯಲಿವೆ. ಮಕ್ಕಳಿಗಾಗಿ ವಿಶೇಷವಾಗಿ ಮುದ್ದುಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರಿಗಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಭಕ್ತಿ ರಸಮಂಜರಿ ಕಾರ್ಯಕ್ರಮವೂ ನಡೆಯಲಿದೆ.
ಶಿರ್ಲಾಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾಭಿಮಾನಿಗಳು ಕುಟುಂಬ ಸಮೇತರಾಗಿ ಆಗಮಿಸಿ ಉತ್ಸವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವಸದಸ್ಯರು ಮನವಿ ಮಾಡಿದ್ದಾರೆ.

