ವಿದ್ಯುತ್ ಶಾಕ್‌ ತಗುಲಿ ತಾಯಿ-ಮಗ ಮೃತ್ಯು

0
167

ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ವಿದ್ಯುತ್ ಶಾಕ್ ತಗುಲಿ ತಾಯಿ ಮರ್ಸಿ ಮಸ್ಕರೇನಸ್ (45) ಮತ್ತು ಮಗ ಶೋನ್ ಮಸ್ಕರೇನಸ್ (18) ಮೃತಪಟ್ಟಿದ್ದಾರೆ. ಮಗನನ್ನು ರಕ್ಷಿಸಲು ಹೋದಾಗ ತಾಯಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೂಡುಬಿದಿರೆ ಹೋಲಿ ರೋಸರಿ ವಿದ್ಯಾರ್ಥಿಯಾಗಿದ್ದ ಶೋನ್ ಮಸ್ಕರೇನಸ್ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ಬೆಳಿಗ್ಗೆ ಸುಮಾರು 7ರಿಂದ 8 ಗಂಟೆಯ ವೇಳೆಗೆ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆ ಬಂದ ಕಾರ್ಮಿಕರೊಬ್ಬರು ಸ್ಥಳಕ್ಕೆ ಬಂದಾಗ ಘಟನೆ ಗಮನಕ್ಕೆ ಬಂದಿದೆ.