ಶ್ರೀ ಕ್ಷೇತ್ರ ಕೇಮಾರು ಮಠಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ; ಅಭಿವೃದ್ಧಿಗೆ ಸಂಪೂರ್ಣ ಸಹಕಾರದ ಭರವಸೆ

0
35

ಮೂಡುಬಿದಿರೆ : ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶ್ರೀ ಸಾಂದೀಪನಿ ಸಾಧನಾಶ್ರಮ, ಶ್ರೀ ಕ್ಷೇತ್ರ ಕೇಮಾರುಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪೀಠಾಧಿಪತಿಗಳಾದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಸಂಸದರನ್ನು ಆತ್ಮೀಯವಾಗಿ ಸ್ವಾಗತಿಸಿ ಆಶೀರ್ವದಿಸಿ ಗೌರವಿಸಿದರು.

ಭೇಟಿಯ ವೇಳೆ ಶ್ರೀ ಕ್ಷೇತ್ರ ಕೇಮಾರು ಹಾಗೂ ನವೀಕರಣ ಕಾಮಗಾರಿ ನಡೆಯುತ್ತಿರುವ ಕೊಲ್ಲೂರು ಶಾಖಾ ಮಠದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶ್ರೀ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಕೊಲ್ಲೂರು ಶಾಖಾ ಮಠದ ನವೀಕರಣ ಕಾರ್ಯಗಳಿಗೆ ತಮ್ಮ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಸಹಕಾರಿ ಧುರೀಣ ದಯಾನಂದ ಪೈ, ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಕಾರ್ಯದರ್ಶಿ ಭರತ್ ಶೆಟ್ಟಿ, ಪಾಲಡ್ಕ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸುಕೇಶ್ ಶೆಟ್ಟಿ ಕೇಮಾರು, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಇರುವೈಲು, ವಿಠಲ್ ಮುಲ್ಕಿ, ಸುದರ್ಶನ್ ಆಚಾರ್ಯ ಕೇಮಾರು, ಜೀವಂಧರ್ ಶೆಟ್ಟಿಗಾರ್, ಚಂದ್ರ ಪೂಜಾರಿ, ಶಿವಪ್ರಸಾದ್ ಶೆಟ್ಟಿ, ರಂಜಿತ್ ಕೋಟ್ಯಾನ್, ಹರೀಶ್ ಪೂಜಾರಿ, ಶಾಶ್ವತ್ ಪೂಜಾರಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here