ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

0
19

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.

ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಕ್ರಿಯಿಸಿರುವ ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಭಾಗದ ಜನರನ್ನು ತಲುಪುವುದು; ಆ ಮೂಲಕ ಅವರ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕೆಂಬ ಆಶಯ ನನ್ನದು. ಜನರ ಸಮಸ್ಯೆಗಳು-ಸವಾಲುಗಳಿಗೆ ಖುದ್ದು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ‌ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್ ದಂಬೇಕೋಡಿ, ಕಿಶೋರ್ ಶಿರಾಡಿ, ವಿನಯ್ ಮುಳುಗಾಡು, ವಿನಯ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೇಶವ ಭಟ್ ಮುಳಿಯ, ಶ್ರೀಕಾಂತ್ ಮಾವಿನಕಟ್ಟೆ, ಸೋಮಶೇಖರ್ ಕಟ್ಟೆಮನೆ, ಚಂದ್ರಹಾಸ ಶಿವಾಲ , ಎಟಿ ಕುಸುಮಾಧರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here