ಇನ್ನಂಜೆ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

0
20

ನೂತನ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬಡಗುಕೆರೆ ನೇಮಕ

ಇನ್ನಂಜೆ : ಇನ್ನಂಜೆ ಯುವಕ ಮಂಡಲ (ರಿ) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬಡಗುಕೆರೆ, ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಇನ್ನಂಜೆ ಹಾಗೂ ಕೋಶಾಧಿಕಾರಿಯಾಗಿ ರಾಜೇಶ್ ಜಿ. ಉಂಡಾರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಉದಯ ಆಚಾರ್ಯ ಇನ್ನಂಜೆ, ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರಶಾಂತ್ ಆಚಾರ್ಯ ಕಲ್ಯಾಲು ಮತ್ತು ಸಂದೀಪ್ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ದಿವೇಶ್ ಶೆಟ್ಟಿ ಕಲ್ಯಾಲು ಹಾಗೂ ಜೊತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಆಚಾರ್ಯ ಮಾಲದಬೆಟ್ಟು ಆಯ್ಕೆಯಾದರು.

ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಮಧುಸೂದನ್ ಆಚಾರ್ಯ, ವೀರೇಶ್ ಶಾಂತಿಕೆರೆ ಹಾಗೂ ರವಿ ಕಾಪು ಅವರನ್ನು ಆಯ್ಕೆ ಮಾಡಲಾಯಿತು. ಲೆಕ್ಕ ಪರಿಶೋಧಕರಾಗಿ ತರುಣ್ ಕುಮಾರ್ ಆಯ್ಕೆಯಾಗಿದ್ದು, ವಿವಿಧ ಜವಾಬ್ದಾರಿಗಳಿಗೆ ಸಮಿತಿ ಸದಸ್ಯರನ್ನೂ ನೇಮಿಸಲಾಯಿತು.

ನೂತನ ಪದಾಧಿಕಾರಿಗಳು ಯುವಕ ಮಂಡಲದ ಸಂಘಟನಾ ಚಟುವಟಿಕೆಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.