ಯಕ್ಷಗಾನ, ಶೈಕ್ಷಣಿಕ ಕಾಳಜಿಯ ಸಾಧನೆಗೆ ಶ್ರೀಮತಿ ಜಯಲಕ್ಷ್ಮಿ ಕಾರಂತರಿಗೆ ಸನ್ಮಾನ

0
78

ಕೇರಳ ಗಡಿನಾಡಿ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇತ್ತೀಚಿಗೆ ಕಾಸರಗೋಡು ಜಿಲ್ಲೆಯ ಮೀಯ ಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯ ಸಭಾಂಗಣದಲ್ಲಿ “ಕನ್ನಡಿಯಲ್ಲಿ ಕನ್ನಡಿಗ” ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಕೇರಳದ ಗಡಿನಾಡಿನ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರವರನ್ನು ಯಕ್ಷಗಾನ ಸೇರಿದಂತೆ ಶೈಕ್ಷಣಿಕ ಕಾಳಜಿಯ ಸಾಧನೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲಾ ಲೇಖಕರ ಸಂಘದ ಅಧ್ಯಕ್ಷರಾದ ಡಾ. ರಮಾನಂದ ಬನಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಖ್ಯಾತ ಸಾಹಿತಿ ವಿಮರ್ಶಕರಾದ ಅರವಿಂದ ಚೊಕ್ಕಾಡಿ, ಕ.ಸಾ.ಪ.ದ ನಿಕಟಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರು, ಖ್ಯಾತ ಹಿರಿಯ ಸಾಹಿತಿ ಡಾ. ಮುರಳೀ ಮೋಹನ್ ಚೂಂತಾರು, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್.ಸುಬ್ಬಯ ಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

ರಮಾನಂದ ಬನಾರಿಯವರು ಕಾಸರಗೋಡಿನ 60 ವರ್ಷ ಮೀರಿದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ ಸಂದರ್ಶನ ಏರ್ಪಡಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತರ ಸಾಧನೆಯ ಲೇಖನ “ಕನ್ನಡಿಯಲ್ಲಿ ಕನ್ನಡಿಗ” ಗ್ರಂಥದಲ್ಲಿ ಪ್ರಕಟಿಸಿದ್ದಾರೆ. ಕಲಾಕುಂಚದ ಪದಾಧಿಕಾರಿಗಳು, ಸರ್ವ ಸದಸ್ಯರು ಶ್ರೀಮತಿ ಜಯಲಕ್ಷ್ಮಿ ಕಾರಂತರವರಿಗೆ ಅಭಿ ಮಾನದಿಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here