ಮೂಲ್ಕಿ ಸುಂದರಾಂ ಶೆಟ್ಟಿ ಕಾಲೇಜು ಶಿರ್ವ, ಇಲ್ಲಿ ದಿನಾಂಕ 02-04-2024 ರಂದು ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಜಯಮಾದವ-ಸಹಾಯಕ ಚುನಾವಣಾ ಅಧಿಕಾರಿ ಕಾಪು ವಿಧಾನಸಭಾ ಕ್ಷೇತ್ರ ಮತ್ತು ಡಾ. ಪ್ರತಿಭಾ -ತಹಶೀಲ್ದಾರರು ಕಾಪು ತಾಲೂಕು ಮತ್ತು ರೆವೆನ್ಯೂ ಇನ್ಸ್ಪೆಕ್ಟರ್ ಇಸಾದ್ ಶಬೀರ್ ಅನಂತ ಪದ್ಮನಾಭ ನಾಯಕ್-ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಶಿರ್ವ ಮತ್ತು ಶ್ವೇತಾ -ಗ್ರಾಮ ಆಡಳಿತ ಅಧಿಕಾರಿ ಗ್ರಾಮ ಪಂಚಾಯತ್ ಶಿರ್ವ ಇವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಜಯಮಾಧವರವರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ನಂತರ ಕಾಪು ತಾಲೂಕಿನ ತಹಶೀಲ್ದಾರರಾದ ಡಾ. ಪ್ರತಿಭಾ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ಕಾಲೇಜಿನ ರಾಜ್ಯಶಾಸ್ತ್ರದ ವಿಭಾಗದ ಉಪನ್ಯಾಸಕಿಯಾದ ಪ್ರಿಯಾಂಕ ಕಾರ್ಯಕ್ರಮವನ್ನು ನಿರೂಪಿಸಿದರು.ಶಿರ್ವ ಗ್ರಾಮ ಪಂಚಾಯಿತ್ ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ ನಾಯಕ್ ಇವರು ಎಲ್ಲರನ್ನು ವಂದಿಸಿದರು.