ಬೆಂಗಳೂರು: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ದೂರನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿಸಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದಾರೆ. ಸದ್ಯ ಸಿದ್ದರಾಮಯ್ಯನವರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಸುಧೀರ್ಘ ಸಮಾಲೋಚನೆ ನಡೆಸಿದ್ದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ಅಬ್ರಹಾಂಗೆ ಕರೆ ಬಂದಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಅಬ್ರಹಾಂ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.