ಮುಲ್ಕಿ: ಇಲ್ಲಿಗೆ ಸಮೀಪದ ಕೊಲೆಕಾಡಿ ಶ್ರೀ ಶಿರಿಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಮಹೋತ್ಸವವು ವೇದಮೂರ್ತಿ ವಾದಿರಾಜ ಉಪಾಧ್ಯಾಯ ಮಾರ್ಗದರ್ಶನದಲ್ಲಿ ನಡೆಯಿತು
ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ಕ್ಷೇತ್ರದ ಅರ್ಚಕರಾದ ಪ್ರದೀಪ್ ಸಾಲ್ಯಾನ್ ಪುರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ, ಕಾಕಡ ಆರತಿ , ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಪಂ.ಉಪಾಧ್ಯಕ್ಷ ಮನೋಹರ ಕೋಟ್ಯಾನ್,ಮಂದಿರದ ಅಧ್ಯಕ್ಷ ಈಶ್ವರ್ ಎಲ್.ಶೆಟ್ಟಿ, ಕೋಶಾಧಿಕಾರಿ ರಂಗನಾಥ ಶೆಟ್ಟಿ, ಕಾರ್ಯದರ್ಶಿ ಶ್ರೀಧರ ಕೋಟ್ಯಾನ್, ಜಯಶ್ರೀ ಎಸ್. ಕೋಟ್ಯಾನ್, ಯೋಗಾನಂದ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಗುರುಪಾದುಕಾಪೂಜೆ, ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ, ರಾತ್ರಿ ಧೂಪಾರತಿ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಸಾವಿರಾರು ಮಂದಿ ಭಕ್ತಾದಿಗಳು ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.