ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66 ರರ ಮುಲ್ಕಿ ಸಮೀಪ ಕಾರ್ನಾಡ್ ಬೈಪಾಸ್ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು , ಕಾರಿನಲ್ಲಿದ್ದವರು ಪವಾಡ ಸದೃಶ ಪಾರಾಗಿದ್ದಾರೆ , ಹುಬ್ಬಳ್ಳಿ ಕಡೆಯಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರು ಮುಲ್ಕಿ ಸಮೀಪದ ಕಾರ್ನಾಡ್ ಬೈಪಾಸ್ ತಲುಪುತ್ತಿದ್ದಂತೆ , ಮಂಗಳೂರು ಕಡೆಯಿಂದ ಕಾರ್ನಾಡ್ ಬೈಪಾಸ್ ಮೂಲಕ ಕಾರ್ನಾಡ್ ಒಳ ಪೇಟೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ . ಅಪಘಾತದಿಂದ ಎರಡು ಕಾರುಗಳು ಜಖಂಗೊಂಡಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ . ಸ್ಥಳಕ್ಕೆ ಹೆದ್ದಾರಿ ಇಲಾಖೆಯ ಸಿಬ್ಬಂದಿ ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ , ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.


