ಮುಲ್ಕಿ: ಅಹಮದಾಬಾದ್ ವಿಮಾನ ದುರಂತ-ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ಭ್ರಮೆ; ತೀವ್ರ ಸಂತಾಪ

0
181

ಮುಲ್ಕಿ: ಗುಜರಾತ್ ನ ಅಹ್ಮದಾಬಾದ್ ಏರ್ಪೋರ್ಟ್ ಬಳಿ ನಡೆದ ಘೋರ ವಿಮಾನ ದುರಂತದ ಬಗ್ಗೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಅಂತರಾಷ್ಟ್ರೀಯ ವಾಸ್ತುತಜ್ಞ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ ವ್ಯಕ್ತಪಡಿಸಿ ಹಾಗೂ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ದುರಂತದ ಬಗ್ಗೆ ಮಾಧ್ಯಮ ಹೇಳಿಕೆಯಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಘನ ಘೋರ ದುರಂತ ಆಗಬಾರದಿತ್ತು. ದುರಂತದಲ್ಲಿ ಮಂಗಳೂರಿನ ಪೈಲಟ್ ಸಹಿತ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ., ಅಹಮದಾಬಾದ್ ನಿಂದ ಲಂಡನ್ ಗೆ ಹೊರಟ ದುರಂತಕ್ಕೀಡಾದ ವಿಮಾನದಲ್ಲಿ ಪ್ರಯಾಣಿಕರು ಕೆಲವರು ತಮ್ಮ ಜೀವನದ ದುಡಿಮೆಗಾಗಿ, ಕುಟುಂಬದ ಅವಲಂಬಿಸಿದವರು ತುಂಬಾ ಮಂದಿ ಇದ್ದಾರೆ, ಮಡಿದವರ ಕುಟುಂಬಕ್ಕೆ ಆ ಭಗವಂತನು ಚಿರಶಾಂತಿ ಕರುಣಿಸಲಿ ಎಂದು ಹೇಳಿದ್ದಾರೆ.
ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಈಗಾಗಲೇ ತುರ್ತು ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದು ಕಾರ್ಯಾಚರಣೆ ಬಿರುಸಿನಿಂದ ಸಾಗುತ್ತಿದೆ, ನಾಗರಿಕರು ಸಂಯಮದಿಂದ ವರ್ತಿಸಿ ದುರಂತಕ್ಕೀಡಾದ ಕುಟುಂಬಗಳಿಗೆ ಸಾಂತ್ವಾನ ಹಾಗೂ ಗರಿಷ್ಠ ಪರಿಹಾರ ನೀಡಬೇಕಾಗಿದೆ ಎಂದರು
ವಿಮಾನ ದುರಂತದಿಂದ ಮಾಡಿದವರಿಗೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್ , ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಹರ್ಷರಾಜ ಶೆಟ್ಟಿ, ಪುತ್ತು ಬಾವ ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬರ್ನಾಡ್, ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್,ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ ,ಲ. ವೆಂಕಟೇಶ ಹೆಬ್ಬಾರ್, ಮುಲ್ಕಿ ವಿಜಯ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಹಳೆಯಂಗಡಿ ಪಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಪತ್ರಕರ್ತ ಪುನೀತ್ ಕೃಷ್ಣ
ಬಿರುವೆರ್ ಕುಡ್ಲ ಸಂಘಟನೆಯ ಮುಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಉದಯಕುಮಾರ್ ಶೆಟ್ಟಿ ಅಧಿಧನ್, ಗೌತಮ್ ಜೈನ್ ಮುಲ್ಕಿ ಅರಮನೆ, ಲ.ಕಿಶೋರ್ ಶೆಟ್ಟಿ ಬಪ್ಪನಾಡು, ಶರತ್ ಕಾರ್ನಾಡ್, ಶಿವರಾಂ ಜಿ ಅಮೀನ್, ಧರ್ಮಾನಂದ ಶೆಟ್ಟಿಗಾರ್,ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here