ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಜಂಕ್ಷನ್ ಬಳಿ ಸ್ಕೂಟರ್ ಗೆ ವಿರುದ್ಧ ದಿಕ್ಕಿನಿಂದ ಬಂದ ಆಟೋರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ
ಗಾಯಗೊಂಡವರನ್ನು ಸ್ಕೂಟರ್ ಸವಾರ ಪಡುಬಿದ್ರೆ ಕಂಚಿನಡ್ಕ ನಿವಾಸಿ ಮೊಹಮ್ಮದ್ ನಬಿಲ್ (20) ಹಾಗೂ ಆಟೋ ಚಾಲಕ ಕೆಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ನಿವಾಸಿ ಬಾಬು(45) ಎಂದು ಗುರುತಿಸಲಾಗಿದೆ.
ಹಳೆಯಂಗಡಿ ಕಡೆಯಿಂದ ಪಡುಬಿದ್ರೆ ಕಡೆಗೆ ಚಲಿಸುತ್ತಿದ್ದ ಸ್ಕೂಟರ್ ಗೆ ಪಡುಪಣಂಬೂರು ಒಳಪೇಟೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೆಯಂಗಡಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಆಟೋ ಚಾಲಕ ಹಾಗೂ ಸ್ಕೂಟರ್ ಸವಾರರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ವಾಹನಗಳು ಅಪಘಾತದಿಂದ ಜಖಂಗೊಂಡಿದೆ.
ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಅಪಘಾತಕ್ಕೀಡಾದ ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ