ಮುಲ್ಕಿ: ಇಲ್ಲಿಗೆ ಸಮೀಪದ ಕಕ್ವಗುತ್ತು ಎನ್ ಎಸ್ ಮನೋಹರ ಶೆಟ್ಟಿ (87) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪ್ರತಿಷ್ಠಿತ ವಿಜಯ ಬ್ಯಾಂಕ್ ನ ಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಮುಲ್ಕಿ ಸುಂದರ್ ರಾಮ್ ಶೆಟ್ಟಿ ಟ್ರಸ್ಟ್ ನಲ್ಲಿ ಗೌರವ ಸಲಹೆಗಾರರಾಗಿ ಹಾಗೂ ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮುಕ್ತೇಸರರಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿ ದೇವಸ್ಥಾನದ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದರು. ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದರು
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಸುಭಾಷ್ ಶೆಟ್ಟಿ, ಸದಸ್ಯರಾದ ಯೋಗೀಶ್ ಕೋಟ್ಯಾನ್, ಹರ್ಷರಾಜ ಶೆಟ್ಟಿ,ಬಾಲಚಂದ್ರ ಕಾಮತ್, ಮುಲ್ಕಿ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಸತೀಶ್ ಭಂಡಾರಿ,ಮುಲ್ಕಿ ಬಿಲ್ಲವರ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ಮಾಜೀ ಅಧ್ಯಕ್ಷರಾದ ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ಗೋಪಿನಾಥ ಪಡಂಗ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಮಟ್ಟು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು,ಬಪ್ಪನಾಡು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಪಳ್ಳಿ, ಅಕೌಂಟೆಂಟ್ ಶಿವಶಂಕರ್ ವರ್ಮ, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು , ಚಂದ್ರಶೇಖರ ಸುವರ್ಣ, ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಶಮೀನ ಆಳ್ವ ಕೆಂಚನಕೆರೆ, ಉದಯಕುಮಾರ್ ಶೆಟ್ಟಿ ಅದಿಧನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ವಿಕಾಸ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ನವೀನ್ ರಾಜ್, ಶರತ್ ಕಾರ್ನಾಡ್, ಧರ್ಮಾನಂದ ಶೆಟ್ಟಿಗಾರ್, ಶಂಕರ್ ಪಡಂಗ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಬುಧವಾರ ಸಂಜೆ 4 ಗಂಟೆಗೆ ಮುಲ್ಕಿ ಕುಬೆವೂರು ಕೆಳಗಿನ ಮನೆಯಲ್ಲಿ ಮನೋಹರ ಶೆಟ್ಟಿಯವರ ಅಂತಿಮ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಲ್ಕಿ: ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಎನ್ ಎಸ್ ಮನೋಹರ ಶೆಟ್ಟಿ ನಿಧನ
RELATED ARTICLES