ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಅಂಗಾರಗುಡ್ಡೆ ನಿವಾಸಿ ಲಕ್ಕಿ ಕುಮಾರ್ (13)ರವರು ಹೃದಯ ಸಂಬಂಧಿತ ಕಾಯಿಲೆ ಉಲ್ಬಣಿಸಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು
ಅವರು ಮುಲ್ಕಿ ಸಮೀಪದ ಮೇಡಲಿನ್ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದರು.
ಮೃತ ವಿದ್ಯಾರ್ಥಿ ತಂದೆ ತಾಯಿ ಹಾಗೂ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.
ಶಾಲೆಯಲ್ಲಿ ಮೃತ ಬಾಲಕನ ನಿಧನಕ್ಕೆ ಮೌನ ಪ್ರಾರ್ಥನೆ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.