Thursday, December 5, 2024
Homeಮುಲ್ಕಿಮುಲ್ಕಿ : ತೋಕೂರು ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಹಾಗೂ ಶ್ರಮದಾನ ಕಾರ್ಯಕ್ರಮ

ಮುಲ್ಕಿ : ತೋಕೂರು ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಹಾಗೂ ಶ್ರಮದಾನ ಕಾರ್ಯಕ್ರಮ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ.ಜಿಲ್ಲೆ, ಇವರುಗಳ ಮಾರ್ಗದರ್ಶನದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇದರ ಸಹಕಾರದಲ್ಲಿ ಜಿಲ್ಲಾ , ರಾಜ್ಯ ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ2021ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ , ತೋಕೂರು, ಹಳೆಯಂಗಡಿ, ಇದರ ಆಶ್ರಯದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದ ವಠಾರ, ಹಾಗೂ ಕೆರೆಯ ವಠಾರದಲ್ಲಿ ದಿನಾಂಕ:24-11-2024 ನೇ ಭಾನುವಾರ ಸ್ವಚ್ಛತೆ ಹಾಗೂ ಶ್ರಮದಾನವನ್ನು ಮಾಡಲಾಯಿತು.

ಈ ಸ್ವಚ್ಛತಾ ಕಾರ್ಯ ಹಾಗೂ ಶ್ರಮದಾನದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು ಇಲ್ಲನ ಸದಸ್ಯರು, ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ಗ್ರಾಮಸ್ಥರು, ಹಾಗೂ ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.
ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸಹಕರಿಸಿದರು.

RELATED ARTICLES
- Advertisment -
Google search engine

Most Popular