ಮುಲ್ಕಿ: ಉಡುಪಿ ಜಿಲ್ಲೆಯ ಕಾಪು ಸಮೀಪದ ಬೆಳಪುವಿನಂತಹ ಕುಗ್ರಾಮವನ್ನು ಸುಗ್ರಾಮವನ್ನಾಗಿಸಿದ ಡಾ.ದೇವಿಪ್ರಸಾದ್ ಶೆಟ್ಟಿ ಯವರು ತಮ್ಮ ಅಸಾಧಾರಣ ಪ್ರತಿಭೆಯಿಂದ ಉನ್ನತ ಸ್ಥಾನಗಳನ್ನು ಪಡೆಯುತ್ತಾ ಬಂದಿರುವುದು ಪ್ರಶಂಸನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.


ಅವರು ಮುಲ್ಕಿ ಕಿಲ್ಪಾಡಿ ಯ ತಮ್ಮ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ರವರನ್ನು ಸನ್ಮಾನಿಸಿ ಮಾತನಾಡಿ ಡಾ. ಶೆಟ್ಟಿ ರವರು ಸಹಕಾರ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ತಮ್ಮ ವ್ಯಕ್ತಿತ್ವದ ಘನತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು ಸಾಧನೆ ನಿರಂತರವಾಗಿರಲಿ ಎಂದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *