ಮುಲ್ಕಿ: ಇಲ್ಲಿಗೆ ಸಮೀಪದ ಕೆಎಸ್ ರಾವ್ ನಗರ ನಿವಾಸಿ ಪ್ರೇಮ ಜೆ ಬಂಗೇರ (57) ಹೃದಯಾಘಾತದಿಂದ ಸೋಮವಾರ ನಿಧನರಾದರು
ಅವರು ಪತಿ ರಾಜಕೀಯ ನೇತಾರ ಜನಾರ್ಧನ್ ಬಂಗೇರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಅವರು ಮುಲ್ಕಿಯ ಕೆಎಸ್ ರಾವ್ ನಗರದ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಮಹಿಳಾ ಮಂಡಳಿ, ಭಜನಾ ಮಂಡಳಿಯ ಸಕ್ರಿಯ ಸದಸ್ಯರಾಗಿ ಪರೋಪಕಾರಿಯಾಗಿ ಜನಾನುರಾಗಿಯಾಗಿದ್ದರು
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್
ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಪುತ್ತು ಬಾವ,ಹರ್ಷರಾಜ ಶೆಟ್ಟಿ, ಮಂಜುನಾಥ ಕಂಬಾರ್, ಲೋಕೇಶ್ ಕೋಟ್ಯಾನ್, ಭೀಮಾ ಶಂಕರ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನಕೋಟ್ಯಾನ್, ಮಾಜೀ ಅಧ್ಯಕ್ಷರಾದ ಪ್ರಕಾಶ್ ಸುವರ್ಣ, ಗೋಪಿನಾಥ ಪಡಂಗ, ರಮೇಶ್ ಅಮೀನ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಸಾಲ್ಯಾನ್ ಚಿತ್ರಾಪು, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಧರ್ಮಾನಂದ್ ಶೆಟ್ಟಿಗಾರ್, ಕೆಎಸ್ ರಾವ್ ನಗರದ ಬಿಲ್ಲವ ಸಂಘದ ಅಧ್ಯಕ್ಷ ಮಹಾಬಲ ಸನಿಲ್, ಮಹಿಳಾ ಮಂಡಳಿ, ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.