ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ.
ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರು ಮೂಲಕ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಹಾನಿಯಾಗಿದ್ದು ಕಾರಿನ ಚಾಲಕ ಮುಲ್ಕಿ ಕೊಳಚಿ ಕಂಬಳ ನಿವಾಸಿ ಅಲ್ತಾಫ್ ಮತ್ತೋರ್ವ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿದ್ದು ಕೂಡಲೇ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಅಪಘಾತಕ್ಕೀಡಾದ ಕಾರನ್ನು ಸ್ಥಳೀಯರ ನೆರವಿನೊಂದಿಗೆ ತೆರವುಗೊಳಿಸಿದ್ದಾರೆ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್, ಬಪ್ಪನಾಡು ಹಾಗೂ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಹೆದ್ದಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕ ಮೋಹನ್ ಕುಬೆವೂರು ಒತ್ತಾಯಿಸಿದ್ದಾರೆ