ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಬಳಿಯ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
ಬಳಿಕ ಶಾಸಕರು ಕಚೇರಿಯ ಸಿಬ್ಬಂದಿಗಳ ತುರ್ತು ಸಭೆ ನಡೆಸಿ ಕಚೇರಿಗೆ ಕೆಲಸಕ್ಕೆ ಬರುವ ನಾಗರಿಕರಿಗೆ ಕಚೇರಿಯಲ್ಲಿ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎಂಬ ಅನೇಕ ದೂರುಗಳು ಬಂದಿದ್ದು ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಗೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರಕಾರಿ ಕಚೇರಿಗೆ ಕೆಲಸದ ನಿಮಿತ್ತ ಬರುವ ನಾಗರಿಕರಿಗೆ ಯಾವುದೇ ತೊಂದರೆಯಾದರೆ ನಾನು ಸುಮ್ಮನಿರುವುದಿಲ್ಲ ಎಂದು ಕಚೇರಿ ಸಿಬ್ಬಂದಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈ ಸಂದರ್ಭ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯ ಸುಭಾಷ್ ಶೆಟ್ಟಿ, ವಿಠಲ್ ಎನ್ ಎಂ,ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್,ವಿಲ್ಮಾ ಮತ್ತಿತರರು ಉಪಸ್ಥಿತರಿದ್ದರು.