ಮುಲ್ಕಿ:ತಿಂಗಳ ಬೆಳಕು ಕಾರ್ಯಕ್ರಮ

0
78

ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧಕ ಶ್ರಮಜೀವಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ ಎಂದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲೆ ಚಂದ್ರಿಕಾ ಭಂಡಾರಿ, ಉದ್ಯಮಿ ಜೋನ್ ಕ್ವಾಡ್ರಾಸ್, ಸಮಾಜ ಸೇವಕ ಶೇಖರ್ ಕೋಟ್ಯಾನ್ ಕೊಳಚಿ ಕಂಬಳ,ಹೊಸ ಅಂಗಣದ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಗಿರಿಧರ ಅಮೀನ್, ಜೆ.ಸಿ ದಿನೇಶ್ ಶೆಟ್ಟಿ, ಜಯಪಾಲ ಶೆಟ್ಟಿ ಐಕಳ, ವಾಮನ್ ಕೋಟ್ಯಾನ್ ನಡಿಕುದ್ರು, ಬಂಕಿನಾಯಕರು, ಸರೋಜಿನಿ ಸುವರ್ಣ, ರಮೇಶ್ ಅಮೀನ್ ಕೊಕ್ಕರಕಲ್, ನಂದಾ ಪಾಯಸ್, ವಕೀಲ ರವೀಶ್ ಕಾಮತ್, ವಾಮನ್ ಕೋಟ್ಯಾನ್ ನಡಿಕುದ್ರು, ಲತಾ ಶೇಖರ್
ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಕಳೆದ 27 ವರ್ಷಗಳಿಂದ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ನೀರು ಸರಬರಾಜು ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿರುವ ಶ್ರಮಜೀವಿ ಕಲ್ಯಾಣಿ ರವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here