ಮುಲ್ಕಿ: ತೀವ್ರ ಕುತೂಹಲ ಕೆರಳಿಸಿರುವ ಮುಲ್ಕಿ ಪಟ್ಟಣ ಪಂಚಾಯತ್ ನ ಎರಡನೆಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಆ. 23 ಶುಕ್ರವಾರ ಪಟ್ಟಣ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು
ಮುಲ್ಕಿ ನಗರ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಸತೀಶ್ ಅಂಚನ್ ಉಪಾಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಲಕ್ಷ್ಮೀ ಆಯ್ಕೆಯಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಸತೀಶ್ ಅಂಚನ್ ರವರು ಕಾಂಗ್ರೆಸ್ ಅಭ್ಯರ್ಥಿ ಬಾಲಚಂದ್ರ ಕಾಮತ್ ರವರನ್ನು ಸೋಲಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಲಕ್ಷ್ಮಿ ರವರು ಕಾಂಗ್ರೆಸ್ ಪಕ್ಷದ ವಿಮಲಾ ಪೂಜಾರಿ ರವರನ್ನು ಸೋಲಿಸಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಮತದಾನದಲ್ಲಿ ಭಾಗವಹಿಸಿದ್ದರು.
ಮುಲ್ಕಿ ನಗರ ಪಂಚಾಯತ್ ಆಡಳಿತ ಅಧಿಕಾರಿ ಪ್ರದೀಪ್ ಕುರ್ಡೇಕರ್, ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮಧುಕರ್ ಮತ್ತಿತರರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬಿಜೆಪಿ ಕಾರ್ಯಕರ್ತರು ಪಕ್ಷದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸರ್ಕಾರದ ನಿಯಮಾವಳಿಯಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ನೀಡಲಾಗಿದ್ದು ಒಟ್ಟು 18 ಸದಸ್ಯ ಬಲದ ನಗರಾಡಳಿತ ದಲ್ಲಿ ಕಾಂಗ್ರೆಸ್ 9, ಬಿಜೆಪಿ 8 ಮತ್ತು ಜೆಡಿಎಸ್ ಒಂದು ಸ್ಥಾನ ಹೊಂದಿದೆ.
ಈ ಬಾರಿ ಬಿಜೆಪಿ-ಜೆಡಿಎಸ್ ರಾಜ್ಯ ಮಟ್ಟದ ಹೊಂದಾಣಿಕೆಯಿಂದ ಬಿಜೆಪಿ-ಕಾಂಗ್ರೆಸ್ ಬಲಾಬಲ 9-9 ಆಗಿದ್ದು ಜತೆಗೆ ಸಂಸದರು ಮತ್ತು ಶಾಸಕರ ಮತದ ಬಲದಿಂದ ಬಿಜೆಪಿ ಮರಳಿ ಅಧಿಕಾರ ಪಡೆದಿದೆ.
ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಸಂಸದ ಬ್ರಿಜೇಶ್ ಚೌಟ,ಶಾಸಕ ಉಮಾನಾಥ ಕೋಟ್ಯಾನ್, ಡಾ.ಹರಿಕೃಷ್ಣ ಪುನರೂರು ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಬಳ್ಕುಂಜೆ,ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಬಿಜೆಪಿ ನಾಯಕರಾದ ಭುವನಾಭಿರಾಮ ಉಡುಪ,ದೇವಪ್ರಸಾದ್ ಪುನರೂರು, ಈಶ್ವರ್ ಕಟೀಲು, ಅಭಿಲಾಶ್ ಕಟೀಲ್, ಉದಯ ಅಮೀನ್ ಮಟ್ಟು ಪಡುಪಣಂಬೂರು ಗ್ರಾ.ಪಂ.ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸದಸ್ಯರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ಮೋಹನ್ ದಾಸ್
ಹಳೆಯಂಗಡಿ ಗ್ರಾಪಂ.ಪೂರ್ಣಿಮಾ, ಲಕ್ಷ್ಮಣ್ ಸಾಲ್ಯಾನ್ ಪುನರೂರು, ಸತ್ಯೇಂದ್ರ , ಕಲ್ಪೇಶ್ ಶೆಟ್ಟಿ,ಶ್ಯಾಮ್ ಪ್ರಸಾದ್, ವಿಠ್ಠಲ್ ಎನ್ ಎಂ, ಶರತ್ ಕುಬೆವೂರು, ನವೀನ್ ರಾಜ್ ,, ಉಮೇಶ್ ಮಾನಂಪಾಡಿ, ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.
ಅಹಿತಕರ ಘಟನೆಗಳು ನಡೆಯದಂತೆ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ್ ಹಾಗೂ ಎಸ್ ಐ ಅನಿತಾ ನೇತೃತ್ವದಲ್ಲಿ ಮುಲ್ಕಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು
ನ್ಯಾಯಾಲಯದ ಆದೇಶದಂತೆ ನಗರ ಶಸ್ತ್ರ ಮೀಸಲು ಪಡೆಯ ಬಂದೋಬಸ್ತಿನಲ್ಲಿ ಮುಲ್ಕಿ ನಗರ ಪಂಚಾಯತ್ ಸದಸ್ಯ ಹಕೀಮ್ ರವರನ್ನು ಜಿಲ್ಲಾ ಕಾರಾಗೃಹದಿಂದ ಮತದಾನಕ್ಕೆ ಕರೆತರಲಾಯಿತು.