ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ಕಾರಿಗೆ ತಡೆರಹಿತ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಕ್ಕಳು ಸಹಿತ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಆನಂದ್ ತಡೆ ರಹಿತ ಬಸ್ ಮುಲ್ಕಿ ಬಸ್ ನಿಲ್ದಾಣ ತಲುಪುತ್ತಿದ್ದಂತೆ ಚಾಲಕನ ನಿರ್ಲಕ್ಷ ಚಾಲನೆಯಿಂದ ಹಿಂದಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದ್ದು ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಪಾರಾಗಿದ್ದಾರೆ . ಅಪಘಾತದಿಂದ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಯಿತು.
ಕೂಡಲೇ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಕಾರು ಚಾಲಕ ದೀರಜ್ ಶೆಟ್ಟಿ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

