ಮುಲ್ಕಿ: ಹೊಸ ಅಂಗಣದ ಹರಿಶ್ಚಂದ್ರ ಪಿ. ಸಾಲಿಯಾನ್‌ರವರ “ನುಡಿಮುತ್ತು” ಕೃತಿ ಬಿಡುಗಡೆ ಸಮಾರಂಭವು ಬುಧವಾರ ಮುಲ್ಕಿ ಸ್ವಾಗತ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತು ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕೃತಿ ಬಿಡುಗಡೆ ಮಾಡಿ ಮಾತನಾಡಿ ಕೃತಿಕಾರರನ್ನು ಪ್ರೋತ್ಸಾಹ ಮತ್ತು ಸಹಕಾರ ನೀಡಿದರೆ ಮಾತ್ರ ಸಮಾಜದಲ್ಲಿ ಕಾರ್ಯನಿರ್ವಹಿಸಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಖ್ಯಾತ ವ್ಯೆದ್ಯ ಡಾ. ಅರುಣ್ ಕುಡ್ಡ,ಮುಲ್ಕಿ ,ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್, ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮಂಗಳೂರಿನ ಕಥಾಬಿಂದು ಸಂಸ್ಥೆಯ ಪಿ.ವಿ ಪ್ರದೀಪ್ ಕುಮಾರ್, ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕೀಲೆಂಜೂರು,ಹೊಸ ಅಂಗಣದ ಹರಿಶ್ಚಂದ್ರ ಪಿ. ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಜಯಪಾಲ ಶೆಟ್ಟಿ ಐಕಳ ಮತ್ತಿತರರು ಉಪಸ್ಥಿತರಿದ್ದರು. ದಿನೇಶ್ ಶೆಟ್ಟಿ ಸ್ವಾಗತಿಸಿದರು. ಸತೀಶ್ ಕಿಲ್ಪಾಡಿ ನಿರೂಪಿಸಿದರು ರವಿಚಂದ್ರ ಧನ್ಯವಾದ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ನುಡಿಮುತ್ತು ಕೃತಿ ಬಿಡುಗಡೆ ಹಾಗೂ ಖ್ಯಾತ ಯುವ ಲೇಖಕಿ ಶೆರೋನ್ ಶೆಟ್ಟಿ ಐಕಳ ರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ ನಡೆಯಿತು.