ಮುಲ್ಕಿ: ಪಡುಪಣಂಬೂರು ಹೊಯ್ಗೆಗುಡ್ಡೆ ಶ್ರೀ ಗೌರೀಶಂಕರ ಮಹಾಗಣಪತಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಹಾಗೂ ಶ್ರೀ ದೇವರ ಉತ್ಸವ ಬಲಿ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕ ಶ್ರೀಕಾಂತ್ ಭಟ್ ನೇತೃತ್ವದಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ, ಶತ ರುದ್ರಾಭಿಷೇಕ, ಶ್ರೀ ದೇವರಿಗೆ ಸೀಯಾಳಾಭಿಷೇಕ, ಮಹಾ ಗಣಪತಿಯಾಗ, ಮಹಾಪೂಜೆ ನಡೆಯಿತು.
ಸಂಜೆ ಭಕ್ತಿರಸಮಂಜರಿ, ಭಜನಾ ಕಾರ್ಯಕ್ರಮ, ರಾತ್ರಿ ರಂಗ ಪೂಜೆ, ಶ್ರೀ ದೇವರ ಬಲಿ ಉತ್ಸವ, ಮಹಾಪೂಜೆ, ಚಂದ್ರಮಂಡಲ ಮತ್ತು ರಜತಪಲ್ಲಕಿ ಉತ್ಸವ, ಮಹಾ ಅನ್ನಸಂತರ್ಪಣೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಗಣಪತಿ ಭಟ್ , ಜೀರ್ಣೋದ್ಧಾರ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.