ಮುಲ್ಕಿ: ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರೀ ಮಳೆಗೆ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಒಳಗಡೆ ಮಳೆ ನೀರು ಬಂದು ಭಕ್ತಾದಿಗಳಿಗೆ ತೀವ್ರ ತೊಂದರೆಯಾಯಿತು
ಮುಲ್ಕಿ ಬಿಲ್ಲವ ಸಂಘದ ಬಳಿ ಒಳ ಚರಂಡಿ ಅವ್ಯವಸ್ಥೆಯಿಂದ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸಂಜೆ ವೇಳೆಗೆ ಮಳೆ ಆರ್ಭಟದ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು ಜನ ಜೀವನ ಸಹಜ ಸ್ಥಿತಿಗೆ ಮರಳಿದೆ
ಉಳಿದಂತೆ ತಾಲೂಕು ವ್ಯಾಪ್ತಿಯ ಶಿಮಂತೂರು, ಅತಿಕಾರಿಬೆಟ್ಟು, ಹಳೆಯಂಗಡಿ, ಬಳ್ಕುಂಜೆ, ಮುಲ್ಕಿ ನಗರ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು ಮೊದಲ ಮಳೆಗೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು ಗ್ರಾಮೀಣ ಪ್ರದೇಶದ ಸಂಚಾರ ದುಸ್ತರವಾಗಿ ಪರಿಣಮಿಸಿದೆ.