ಮುಲ್ಕಿ: ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಶ್ರೀ ದೇವರಿಗೆ ಪಂಚಾಮೃತ, ಸೀಯಾಳ, ಕನಕಾಭಿಷೇಕ ನಡೆದು ಮಧ್ಯಾಹ್ನ ಮಹಾ ನೈವೇದ್ಯ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಮಹಾ ಮಂತ್ರಾಕ್ಷತೆ, ಭೂರಿ ಸಮಾರಾಧನೆ ನಡೆಯಿತು.
ಸಂಜೆ ಶ್ರೀ ದೇವರ ಗ್ರಾಮೋತ್ಸವವು ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಉಭಯ ದೇವರಿಗೆ ಮಹಾಮಂಗಳಾರತಿ, ಪಲ್ಲಕ್ಕಿಯಲ್ಲಿ ಶ್ರೀ ದೇವರ ಪೇಟೆ ಸವಾರಿ ನಡೆದು ದೇವಸ್ಥಾನಕ್ಕೆ ಬಂದು ವಿಶ್ರಾಂತಿ ಪೂಜೆ, ನಿತ್ಯೋತ್ಸವ, ವಸಂತ ಪೂಜೆ, ಹೂವಿನ ಪೂಜೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಅರ್ಚಕ ವೃಂದ, ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
ಮುಲ್ಕಿ:ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ
RELATED ARTICLES