Monday, May 12, 2025
Homeಮುಲ್ಕಿಮುಲ್ಕಿ: ಪ್ರೇಮಾನಂದ ಪೈ ನಿಧನ

ಮುಲ್ಕಿ: ಪ್ರೇಮಾನಂದ ಪೈ ನಿಧನ

ಇಲ್ಲಿಗೆ ಸಮೀಪದ ವಿಜಯ ಕಾಲೇಜು ರಸ್ತೆ ಕೋಟಕೇರಿ ನಿವಾಸಿ ಪ್ರೇಮಾನಂದ ಪೈ (67) ಹೃದಯಘಾತದಿಂದ ಭಾನುವಾರ ನಿಧನರಾದರು. ಅವರು ಪತ್ನಿ ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮುಲ್ಕಿ ಪರಿಸರದಲ್ಲಿ ಪಿಗ್ಮಿ ಏಜೆಂಟರಾಗಿ ಬಳಿಕ ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ದೇವಣ್ಣ ನಾಯಕ್ ಎಸ್ ವಿ ಟಿ, ವಿಶ್ವನಾಥ ಶೆಣೈ, ಮುಲ್ಕಿ ಗೌಡ ಸಾರಸ್ವತ ಬ್ರಾಹ್ಮಣ ಸಭಾಧ ಅಧ್ಯಕ್ಷ ಸತ್ಯೇಂದ್ರ ಶೆಣೈ ,ಮುಲ್ಕಿ ನ ಪಂ ಮಾಜೀ ಅಧ್ಯಕ್ಷ ಸುಭಾಷ್ ಶೆಟ್ಟಿ, ಸದಸ್ಯರಾದ ಸತೀಶ್ ಅಂಚನ್, ಬಾಲಚಂದ್ರ ಕಾಮತ್, ಹರ್ಷರಾಜ ಶೆಟ್ಟಿ, ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಡಾ.ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು,ಮುಲ್ಕಿ ವಿಜಯ ರೈತ ಸೇವಾ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಉದಯಕುಮಾರ್ ಶೆಟ್ಟಿ ಆಧಿಧನ್ ಮುಲ್ಕಿ, ವಕೀಲ ರವೀಶ್ ಕಾಮತ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

RELATED ARTICLES
- Advertisment -
Google search engine

Most Popular