ಮುಲ್ಕಿ: ಸೌದಿ ಅರೇಬಿಯಾ ಬಿಲ್ಲವರ ಅಸೋಸಿಯೇಷನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಶ್ರೀ ಜಯಸಿ ಸುವರ್ಣ ಸಭಾಭವನದಲ್ಲಿ ನಡೆಯಿತು
ಬೆಂಗಳೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಆಶೀರ್ವಚನ ನೀಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಸೌದಿ ಬಿಲ್ಲವ ಸಂಘದ ವತಿಯಿಂದ ಪರೋಪಕಾರ ಚಿಂತನೆ ಮಾಡುವ ಯೋಗ ಕೂಡಿ ಬಂದಿದೆ, ಜೀವನದಲ್ಲಿ ಸಹಾಯ ಮಾಡುವ ಮನೋವೃತ್ತಿ ಬೆಳೆಸಿಕೊಂಡರೆ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಲು ಸಾಧ್ಯ, ವಿದ್ಯಾರ್ಥಿಗಳು ಸಹಾಯ ಹಸ್ತವನ್ನು ಸದ್ವಿನಿಯೋಗ ಪಡಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಪರವೂರಿನಲ್ಲಿ ಕಷ್ಟಪಟ್ಟು ದುಡಿದು ಬೆವರು ಹರಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಹಸ್ತ ಕಾರ್ಯ ಅಭಿನಂದನೀಯ ಇದು ನಿರಂತರವಾಗಿ ನಡೆಯಲಿ, ವಿದ್ಯಾರ್ಥಿಗಳು ಸಾಧನೆ ಮಾಡಿ ತಾವೂ ವಿದ್ಯಾರ್ಥಿ ವೇತನ ವಿತರಿಸುವ ಕಾಲ ಕೂಡಿ ಬರಲಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ lಶಾಸಕ ಉಮಾನಾಥ ಕೋಟ್ಯಾನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಸಮಾಜ ಸೇವಕಿ ಗೀತಾಂಜಲಿ ಸುವರ್ಣ ಉಡುಪಿ, ಉದ್ಯಮಿ ಸುಧಾಕರ ಎಂ ಪೂಜಾರಿ ಕಾರ್ಕಳ, ಚಲನಚಿತ್ರ ನಟ ಪೃಥ್ವಿ ಅಂಬರ್,ಸೌದಿ ಅರೇಬಿಯಾ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಕಿಶೋರ್ ಪೂಜಾರಿ , ಗೌರವಾಧ್ಯಕ್ಷ ಕೆಸಿ ಭಾಸ್ಕರ್,ಹೇಮರಾಜ್, ಉಪಾಧ್ಯಕ್ಷ ಗಿರೀಶ್ ಪೂಜಾರಿ ಸುಮಿತ್ರಾ ಭಾಸ್ಕರ್ ಕೊಲ್ಲೂರು, ಜಯಕರ ಎಮ್ ಪೂಜಾರಿ, ಅಜಯ್ ಕುಮಾರ್ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ಉದ್ಯಮಿ
ಶೈಲೇಂದ್ರ ವೈ ಸುವರ್ಣ ರವರನ್ನು ಸಾಧಕರ ನೆಲೆಯಲ್ಲಿ ಸನ್ಮಾನಿಸಲಾಯಿತು ಹಾಗೂ 127 ವಿದ್ಯಾರ್ಥಿಗಳಿಗೆ 6 ಲಕ್ಷ ವೆಚ್ಚದಲ್ಲಿ ವಿದ್ಯಾರ್ಥಿವೇತನ ಹಾಗೂ 11 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಶಶ್ಮಿತಾ ಅಜಯ್ ಸ್ವಾಗತಿಸಿದರು, ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು ಚಂದ್ರಹಾಸ ಬಳಂಜ ನಿರೂಪಿಸಿದರು

