ಮುಲ್ಕಿ : ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕದ ವತಿಯಿಂದ ಮುಲ್ಕಿ ತಾಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಶನಿವಾರ ಕಿನ್ನಿಗೋಳಿ ಸಮೀಪದ ಐಕಳ ಪೊಂಪೈ ಕಾಲೇಜಿನಲ್ಲಿ ನಡೆಯಿತು. ಸಮ್ಮೇಳನವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಕನ್ನಡ ನಾಡಿನ ಸಾಹಿತಿಗಳು ಕನ್ನಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದರು, ಕನ್ನಡಕ್ಕೆ ಸಾಕಷ್ಟು ಮಾನ್ಯತೆ ಸಿಕ್ಕಿದ ಹಾಗೆ ತುಳುವಿಗೂ ಮಾನ್ಯತೆ ಸಿಗಬೇಕು ತುಳು ಉತ್ಸವಗಳು ನಡೆಯಬೇಕು ಎಂದರು.
ಸಮ್ಮೇಳನದ ಅಧ್ಯಕ್ಷತೆಯನ್ನು ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ರೀಧರ ಡಿ.ವಹಿಸಿ ಮಾತನಾಡಿ ಕನ್ನಡವು ಕಲಿಕೆಯ ಭಾಷೆಯಾಗಿದ್ದು ಆಂಗ್ಲ ಭಾಷೆಯು ಆವರಿಸಿಕೊಂಡು ಕನ್ನಡವು ಸಮಗ್ರವಾಗಿ ಹಿನ್ನೆಲೆಗೆ ಸರಿಯುತ್ತಿರುವ ವಿಷಾದದ ಸನ್ನಿವೇಶದಲ್ಲಿ ನಾವಿದ್ದೇವೆ.ಕನ್ನಡವನ್ನು ಸ್ಮರಿಸಿ,ಉಳಿಸಿ ಬೆಳೆಸೋಣ,” ಸಿರಿಗನ್ನಡಂ ಗೆಲ್ಗೆ,” ಸಿರಿಗನ್ನಡಂ ಬಾಳ್ಗೆ” ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಸಾಪ ದ.ಕ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಆಶಯ ನುಡಿಗಳನ್ನಾಡಿದರು .ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಕಥೆಗಾರ ಅಬ್ದುಲ್ ರಶೀದ್ ಸಮ್ಮೇಳನಕ್ಕೆ ನುಡಿಸೇಸೆಗೈದರು ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಗಣೇಶ್ ಅಮೀನ್ ಸಂಕಮಾರ್, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಕೆ.ಪಿ.ಸುಚರಿತ ಶೆಟ್ಟಿ, ದ.ಕ. ಕಸಾಪ ಮಾಜೀ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ,ಮುಲ್ಕಿ ತಾಲೂಕು ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್,ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ ಶೆಟ್ಟಿಗಾರ್
,ಅಬ್ದುಲ್ ರಶೀದ್, ಜನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ , ಜೊಸ್ಸಿ ಪಿಂಟೋ, ಕಾಲೇಜು ಪ್ರಾಂಶುಪಾಲ ಪುರುಷೋತ್ತಮ, ಹೆರಿಕ್ ಪಾಯಸ್, ಮಾಧವ ಎಂ.ಕೆ.ಸನತ್ ಕುಮಾರ್ ಜೈನ್,ಉಳ್ಳಾಲ ಡಾ.ಧನಂಜಯ ಕುಂಬ್ಳೆ,ಮುಲ್ಕಿ ಹೋಬಳಿ ಕ.ಸಾ.ಪ.ಅಧ್ಯಕ್ಷ ಜೊಸ್ಸಿ ಪಿಂಟೋ ,ಮತ್ತಿತರರು ಉಪಸ್ಥಿತರಿದ್ದರು.
ಸಮಿತಿಯ ಅಧ್ಯಕ್ಷ ಪ್ರಥ್ವಿರಾಜ್ ಆಚಾರ್ಯ ಸ್ವಾಗತಿಸಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ಹಿಲ್ಡಾ ಡಿಸೋಜ ಧನ್ಯವಾದ ಸಮರ್ಪಿಸಿದರು. ಶರತ್ ಶೆಟ್ಟಿ ಕಿನ್ನಿಗೋಳಿ, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ ನಿರೂಪಿಸಿದರು
ಬಳಿಕ ವಿವಿಧ ವಿಚಾರಗೋಷ್ಠಿ ನಡೆಯಿತು.ಸಂಜೆ ಮುಲ್ಕಿ ತಾಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ನಡೆಯಲಿದೆ.
ಕಾರ್ಯಕ್ರಮದ ಮೊದಲು ಮುಲ್ಕಿ ತಾಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮೂರುಕಾವೇರಿಯಿಂದ ಪಾಂಪೈ ಕಾಲೇಜಿನವರೆಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆಗೆ ಉದ್ಯಮಿ ಶ್ರೀನಿವಾಸ ಆಚಾರ್ಯ ಚಾಲನೆ ನೀಡಿದರು. ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಚೌಟ ಧ್ವಜಾರೋಹಣ ಗೈದರು, ಪರಿಷತ್ ಧ್ವಜವನ್ನು ಕಸಾಪ ದ.ಕ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಕನ್ನಡ ಧ್ವಜವನ್ನು ತಾಲೂಕು ಪರಿಷತ್ ಅಧ್ಯಕ್ಷ ಮಿಥುನ ಕೊಡೆತ್ತೂರು ಅರಳಿಸಿದರು. ವಸ್ತು ಪ್ರದರ್ಶನ ಉದ್ಘಾಟನೆಯನ್ನು ಪಾಂಪೈ ಕಾಲೇಜು ಸಂಚಾಲಕರಾದ ಒಸ್ವಾಲ್ಡ್ ಮೊಂತೆರೋ ನೆರವೇರಿಸಿದರು.