
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿಯ ಹೆದ್ದಾರಿ ಜಂಕ್ಷನ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ
ಗಾಯಗೊಂಡವರನ್ನು ಮುಲ್ಕಿ ಸಮೀಪದ ಕೆಎಸ್ ರಾವ್ ನಗರ ಲಿಂಗಪ್ಪಯ್ಯ ಕಾಡು ನಿವಾಸಿಗಳಾದ ಭೂತಾಳ ಸಿದ್ದ (32)ಮತ್ತು ಮಲ್ಕಪ್ಪ(24) ಎಂದು ಗುರುತಿಸಲಾಗಿದೆ
ಭಟ್ಕಳ ದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿಯ ಹೆದ್ದಾರಿ ಜಂಕ್ಷನ್ ತಲುಪುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಬ್ಬಿಣದ ತಡೆ ಬೇಲಿಗೆ ಡಿಕ್ಕಿ ಹೊಡೆದು ಬಳಿಕ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ನಿಂದ ಹೆದ್ದಾರಿ ಯೂ ಟರ್ನ್ ಮಾಡುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಇನ್ನೋವಾ ಎದುರು ಭಾಗ ಸಂಪೂರ್ಣ ಜಖಂ ಗೊಂಡಿದೆ ಹಾಗೂ ಹಿಂಬದಿಯ ಟಯರ್ ಗಳು ಪಂಕ್ಚರ್ ಆಗಿದೆ.
ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಟೋಯಿಂಗ್ ವಾಹನದ ಮೂಲಕ ವಾಹನಗಳನ್ನು ತೆರವುಗೊಳಿಸಿದ್ದಾರೆ