ಮುಲ್ಕಿ: ದೇಶದ ಆರ್ಥಿಕತೆಯ ಹರಿಕಾರ ಮೇಧಾವಿ ಸಜ್ಜನ ರಾಜಕಾರಣಿ ಹಕ್ಕುಗಳ ಹರಿಕಾರ ಮಾಜೀ ಪ್ರಧಾನಿ ಡಾಕ್ಟರ್ ಮನಮೋಹನ್ ಸಿಂಗ್ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಮಾಧ್ಯಮದೊಂದಿಗೆ ಮಾತನಾಡಿ ಭಾರತದ ಸರ್ವೋಚ್ಚ ನಾಯಕರಲ್ಲಿ ಡಾ.ಮನಮೋಹನ್ ಸಿಂಗ್ ಒಬ್ಬರಾಗಿದ್ದು ಭಾರತದ ಶ್ರೇಷ್ಠ ಪ್ರಧಾನಿಯಾಗಿ ಅವರ ನಿಷ್ಕಳಂಕ ರಾಜಕೀಯ, ಉತ್ತಮ ಆಡಳಿತ ಜನ ಮೆಚ್ಚುಗೆ ಪಡೆದಿದ್ದು ಭಾರತದ ಆರ್ಥಿಕತೆಯ ಸುಧಾರಣೆಯಲ್ಲಿ ಅವರ ಪಾತ್ರ ಮಹತ್ತರವಾಗಿತ್ತು ಅವರ ನಿಧನ ವಿಶ್ವಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದ್ದಾರೆ.
ಮಾಜೀ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು,ಉದ್ಯಮಿ ಅರವಿಂದ ಪೂಂಜಾ, ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಸುನಿಲ್ ಆಳ್ವ,ಸದಸ್ಯರಾದ ಹರ್ಷರಾಜ ಶೆಟ್ಟಿ, ಪುತ್ತು ಭಾವ, ಸುಭಾಷ್ ಶೆಟ್ಟಿ, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ಮಾಜೀ ಅಧ್ಯಕ್ಷರಾದ ಗೋಪಿನಾಥ ಪಡಂಗ, ಪ್ರಕಾಶ್ ಸುವರ್ಣ, ರಮೇಶ್ ಅಮೀನ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಉದಯಕುಮಾರ್ ಶೆಟ್ಟಿ ಆಧಿಧನ್, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಉದ್ಯಮಿ ಜಾನ್ ಕ್ವಾಡ್ರಾಸ್ ಮುಲ್ಕಿ, ಬಿರುವೇರ್ ಕುಡ್ಲ ಮುಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಶಂಕರ್, ಪಡಂಗ, ಧರ್ಮಾನಂದ ಶೆಟ್ಟಿಗರ್ , ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಹರೀಶ್ ಹೆಜ್ಮಾಡಿ, ಪುನೀತ್ ಕೃಷ್ಣ, ರಘುನಾಥ್ ಕಾಮತ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.