Wednesday, January 15, 2025
Homeಮುಲ್ಕಿಮುಲ್ಕಿ : ತಾಲೂಕು ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ

ಮುಲ್ಕಿ : ತಾಲೂಕು ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ

ಮುಲ್ಕಿ : ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ರೋಟರಿ ಕ್ಲಬ್ ಬೈಕಂಪಾಡಿ, ಇವರ ಮಾರ್ಗದರ್ಶನದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಕಾರ್ಯಕ್ರಮವನ್ನು ದಿನಾಂಕ 29.12.2024 ರಂದು ತೋಕೂರು ಗುತ್ತು ಆಟದ ಮೈದಾನದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು ವಹಿಸಿದ್ದರು ಕ್ರೀಡಾಕೂಟದ ಉದ್ಘಾಟನೆಯನ್ನು ಮಹಿಳಾ ಮಂಡಲ ಮಂಡಲ (ರಿ) ತೋಕೂರು ಇದರ ಕಾರ್ಯದರ್ಶಿ ಶ್ರೀಮತಿ ವನಿತಾ ಕೆ ಸನಿಲ್ ರವರು ವಹಿಸಿ ಕ್ರೀಡೆ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ, ಈ ಭಾಗದಲ್ಲಿ ಕ್ರೀಡಾ ಕ್ಷೇತ್ರದ ಸಾಧಕರ ಸಂಖ್ಯೆ ಹೆಚ್ಚಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ತೋಕೂರು ಗುತ್ತು ಶ್ರೀಮತಿ ಶಕುಂತಲಾ ಜೆ ಶೆಟ್ಟಿ ಮತ್ತು ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ದಿನಕರ್ ಸಾಲ್ಯಾನ್ ರವರು, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ , ಕ್ರೀಡಾ ಕಾರ್ಯದರ್ಶಿಗಳಾದ ಶ್ರೀ ಸಂಪತ್ ಜೆ ಶೆಟ್ಟಿ ಮತ್ತು ಪ್ರಮೋದ್ ದೇವಾಡಿಗ ರವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ ಕುಸುಮ ಮತ್ತು ಬಳಗ ಪ್ರಾರ್ಥನೆಯನ್ನು ನೆರವೇರಿಸಿ ಮಹಮ್ಮದ್ ಶರೀಫ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

RELATED ARTICLES
- Advertisment -
Google search engine

Most Popular