ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ,
ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಹಾಗೂ ಆನೆ ಕಾಲು ರೋಗ ರಕ್ತ ತಪಾಸಣೆ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ಜುಲೈ 15 2024 ರಂದು ನೆರವೇರಿಸಲಾಯಿತು.
ಈ ಶಿಬಿರದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷರೂ ಹಾಗೂ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ್ ಎಸ್ ಪೂಜಾರಿರವರು ವಹಿಸಿದ್ದರು. ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾ ಅಧಿಕಾರಿಯಾದ ಮಾರ್ಗರೇಟ್ ಸುದರ್ಶಿನಿಯವರು ಆನೆಕಾಲು ರೋಗದ ಹರಡುವಿಕೆಯ ಬಗ್ಗೆ ಮತ್ತು ಈ ರೋಗವನ್ನು ತಡೆಗಟ್ಟುವ ವಿಚಾರವಾಗಿ ಸವಿವರವಾಗಿ ವಿವರಿಸಿ ಹೇಳುತ್ತಾ ಮಲೇರಿಯಾ ಮತ್ತು ಡೆಂಗ್ಯೂ ರೋಗಗಳ ಬಗ್ಗೆಯೂ ಮಾಹಿತಿಯನ್ನು ನೀಡಿದರು. ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದುದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ ಮತ್ತು ರೋಟರಿ ಕ್ಲಬ್ ಬೈಕಂಪಾಡಿಯ ನೂತನ ಅಧ್ಯಕ್ಷರಾದ ರೋ. ಹರೀಶ್ ಬಿ. ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಿಬಿರದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ ಇದರ ನಿಕಟ ಪೂರ್ವ ಅಧ್ಯಕ್ಷರಾದ ರೋ. ಸುಧಾಕರ್ ಸಾಲ್ಯಾನ್ ಮತ್ತು ಸದಸ್ಯರು, ಗ್ರಾಮ ಪಂಚಾಯತ್ ಪಡುಪಣಂಬೂರು ಸದಸ್ಯರಾದ ಮೋಹನ್ ದಾಸ್ ಮತ್ತು ಜ್ಯೋತಿ ಕುಲಾಲ್, ಆಶಾ ಕಾರ್ಯಕರ್ತೆಯರು, ಫೇಮಸ್ ಯೂತ್ ಕ್ಲಬ್ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ಮತ್ತು ಮಹಿಳಾ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ ಉಪಸ್ಥಿತರಿದ್ದರು.
ರಾತ್ರಿಯ ಹೊತ್ತು ನೆರವೇರಿದ ಈ ಶಿಬಿರದಲ್ಲಿ ಒಟ್ಟು 31 ಜನರಿಗೆ ಆನೆಕಾಲು ರೋಗದ ರಕ್ತ ಪರೀಕ್ಷೆಯನ್ನು ನೆರವೇರಿಸಲಾಯಿತು.
ಶಿಬಿರವನ್ನು ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರುರವರು ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ, ಹಿಮಕರ್ ಕೋಟ್ಯಾನ್ ರವರು ಧನ್ಯವಾದವನ್ನು ಅರ್ಪಿಸಿದರು ಮಹಮ್ಮದ್ ಶರೀಫ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು