spot_img
29.6 C
Udupi
Wednesday, June 7, 2023
spot_img
spot_img
spot_img

ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆಯಾಗಿ ನೀಡಿದ ಬಹುಭಾಷಾ ನಟ ಪ್ರಕಾಶ್ ರಾಜ್

ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ಚಾಮರಾಜನಗರ ಜಿಲ್ಲೆ ಹನೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.
ಪ್ರಕಾಶ್ ರಾಜ್ ಅವರ ಪಿ ಆರ್ ಎಫ್ ಫೌಂಡೇಶನ್ ವತಿಯಿಂದ ಆಂಬುಲೆನ್ಸ್ ನೀಡಲಾಗಿದ್ದು, ಇದನ್ನು ಸ್ವತಃ ಅವರೇ ಆಸ್ಪತ್ರೆಯ ಆಡಳಿತಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಗ್ರಾಮೀಣ ಪ್ರದೇಶಕ್ಕೆ ಆರೋಗ್ಯ ಸೇವೆ ನೀಡುವಲ್ಲಿ ಹೋಲಿ ಕ್ರಾಸ್ ಆಸ್ಪತ್ರೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಜೊತೆಗೆ ಗುಡ್ಡಗಾಡು ಪ್ರದೇಶಗಳ ಜನತೆಗೆ ಈ ಆಸ್ಪತ್ರೆಯಿಂದ ಅನುಕೂಲವಾಗಲಿ ಎಂದು ಹಾರೈಸಿದರು.

Related Articles

Stay Connected

0FansLike
3,804FollowersFollow
0SubscribersSubscribe
- Advertisement -

Latest Articles